ಹೈದರಾಬಾದ್: ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2 ದಿ ರೂಲ್’ ಸಿನಿಮಾ ದಾಖಲೆ ನಿರ್ಮಿಸಿದೆ. ಸುಕುಮಾರ್ ನಿರ್ದೇಶನದ ಈ ಚಿತ್ರ ಸಾವಿರ ಕೋಟಿ ರೂ ಗಳ ಕ್ಲಬ್ ಸೇರಿದೆ.
ಪುಷ್ಪ 2 ಚಿತ್ರ ಬಿಡುಗಡೆಯಾದ ಕೇವಲ 6 ದಿನಗಳಲ್ಲಿ ಈ ಸಾಧನೆ ಮಾಡಿದೆ. ಅತೀ ವೇಗವಾಗಿ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿದ ಮೊದಲ ಭಾರತೀಯ ಚಿತ್ರ ಎಂಬ ಕೀರ್ತಿಗೆ ‘ಪುಷ್ಪ 2 ದಿ ರೂಲ್’ ಸಿನಿಮಾ ಪಾತ್ರವಾಗಿದೆ.
ತೆಲುಗು ಮಾತ್ರವಲ್ಲ ಹಿಂದಿ, ತಮಿಳು, ಕನ್ನಡ, ಬಂಗಾಳಿ ಮತ್ತು ಮಲಯಾಳಂ ಭಾಷೆಗಳಲ್ಲೂ ತೆರೆಕಾಣುತ್ತಿರುವ ‘ಪುಷ್ಪ 2: ದಿ ರೂಲ್’ ಸಿನಿಮಾ ಈವರೆಗೂ 1002 ಕೋಟಿ ರೂಪಾಯಿ ಗಳಿಸಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.