ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಗೂಂಡಾ ಎಂದಿರುವ ಕಾಂಗ್ರೆಸ್ ನಾಯಕ ಯತೀಂದ್ರ ಸಿದ್ದರಾಮಯ್ಯ ವಿರುದ್ದ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಯತೀಂದ್ರ ಅವರು ಕ್ಷಮೆ ಯಾಚಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಯತಿಂದ್ರ ಸಿದ್ದರಾಮಯ್ಯ ಅವರು ಮೊದಲು ತಮ್ಮ ಯೋಗ್ಯತೆಯನ್ನು ಅರ್ಥಮಾಡಿಕೊಳ್ಳಬೇಕು ಎಂದು ಪ್ರತಿಕ್ರಿಯಿಸಿರುವ ವಿಜಯೇಂದ್ರ, ಕೇಂದ್ರ ಸಚಿವ ಅಮಿತ್ ಶಾ ಬಗ್ಗೆ ಯತೀಂದ್ರ ಅವರು ನೀಡಿರುವ ಹೇಳಿಕೆ ಖಂಡನೀಯ, ಕೂಡಲೇ ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ಲೋಕಸಭಾ ಚುನಾವಣೆಯ ಸೋಲಿನ ಮುನ್ಸೂಚನೆ ಅರಿತಿರುವ ಕಾಂಗ್ರೆಸ್ಸಿಗರು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ಯತಿಂದ್ರ ಸಿದ್ದರಾಮಯ್ಯ ಅವರು ತಮ್ಮ ಯೋಗ್ಯತೆಯನ್ನು ಮೊದಲು ಅರ್ಥಮಾಡಿಕೊಳ್ಳಬೇಕು. ಅಮಿತ್ ಶಾ ಅವರ ಬಗ್ಗೆ ಯತೀಂದ್ರ ಅವರು ನೀಡಿರುವ ಹೇಳಿಕೆ ಖಂಡನೀಯ, ಕೂಡಲೇ ಅವರು ಕ್ಷಮೆಯಾಚಿಸಬೇಕು.
ಲೋಕಸಭಾ ಚುನಾವಣೆಯ ಸೋಲಿನ ಮುನ್ಸೂಚನೆ ಅರಿತಿರುವ ಕಾಂಗ್ರೆಸ್ಸಿಗರು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ.
– ಶ್ರೀ @BYVijayendra, ರಾಜ್ಯಾಧ್ಯಕ್ಷರು… pic.twitter.com/REztFs1TVy
— BJP Karnataka (@BJP4Karnataka) March 29, 2024