ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮಾಧ್ಯಮ ಕಾರ್ಯದರ್ಶಿ ಗುರುಲಿಂಗಸ್ವಾಮಿ ವಿಧಿವಶರಾಗಿದ್ದಾರೆ.
ಸಿಎಂ ಮಾಧ್ಯಮ ಕಾರ್ಯದರ್ಶಿಯಾಗಿ ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಅವರು ತೀವ್ರ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದರು ಎಂದು ಅವರ ಆಪ್ತರು ತಿಳಿಸಿದ್ದಾರೆ.
ಹಲವು ಪತ್ರಿಕೆಗಳಲ್ಲಿ ಮತ್ತು ಸುದ್ದಿವಾಹಿನಿಗಳಲ್ಲಿ ಸೇವೆ ಸಲ್ಲಿಸಿದ್ದ ಗುರುಲಿಂಗ ಸ್ವಾಮಿ ಅವರು, ಬೆಂಗಳೂರು ಮತ್ತು ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಗುರುಲಿಂಗ ಸ್ವಾಮಿ ನಿಧನಕ್ಕೆ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

























































