ಬೆಳಗಾವಿ: ರಾಜ್ಯ ಸರ್ಕಾರದ ವಿರುದ್ದ ರಣಕಹಳೆ ಮೊಳಗಿಸಿರುವ ಪ್ರತಿಪಕ್ಷ ಬಿಜೆಪಿ ಬುಧವಾರ ಬಾರುಕೊಲಿನ ಚಡಿ ಏಟು ಚಳವಳಿ ನಡೆಸಲಿದೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ರೈತ ವಿರೋಧಿ, ಬರ ನಿರ್ವಹಣೆಯಲ್ಲಿ ವಿಫಲವಾಗಿ ಬರದ ಮೇಲೆ ಬರೆ ಎಳೆಯುತ್ತಿರುವುದನ್ನು ಖಂಡಿಸಿ ಸರ್ಕಾರಕ್ಕೆ ಬಾರುಕೊಲಿನ ಚಡಿ ಏಟು ನೀಡಲು ಡಿ. 13ರಂದು ಚಳವಳಿ ನಡೆಸಲಾಗುವುದು ಎಂದು ತಿಳಿಸಿದರು.
ಬಿಜೆಪಿಯ ಈ ಬೃಹತ್ ಪ್ರತಿಭಟನೆಯಲ್ಲಿ ಸುಮಾರು 25 ಸಾವಿರ ಜನರು ಭಾಗವಹಿಸಲಿದ್ದಾರೆ ಎಂದ ಅವರು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ, ಸೇರಿ ಎಲ್ಲ ನಾಯಕರು ಭಾಗವಹಿಸಲಿದ್ದಾರೆ ಎಂದರು.





















































