ಬೆಂಗಳೂರು: ಮೈಸೂರಿನ ಸುತ್ತೂರು ಮಠಾಧೀಶರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರ ಪೂರ್ವಾಶ್ರಮದ ಮಾತೃಶೀ ಶ್ರೀಮತಿ ಶಿವನಾಗಮ್ಮ ವಿಧಿವಶರಾಗಿದ್ದಾರೆ.
ಮಾತೃಶೀ ಶ್ರೀಮತಿ ಶಿವನಾಗಮ್ಮ ನಿಧನಕ್ಕೆ ಸಿಎಂ ಯಡಿಯೂರಪ್ಪ ದುಃಖ ವ್ಯಕ್ತಪಡಿಸಿದ್ದಾರೆ.
ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಪೂರ್ವಾಶ್ರಮದ ಮಾತೃಶೀ ಶ್ರೀಮತಿ ಶಿವನಾಗಮ್ಮನವರ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರ ಆತ್ಮಕ್ಕೆ ಸದ್ಗತಿಯನ್ನು ಹಾಗೂ ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ.
— CM of Karnataka (@CMofKarnataka) June 14, 2021
ಸುತ್ತೂರು ಶ್ರೀಗಳ ಪೂರ್ವಾಶ್ರಮದ ಮಾತೃಶೀ ಶ್ರೀಮತಿ ಶಿವನಾಗಮ್ಮ ನಿಧನಕ್ಕೆ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ.
ಸುತ್ತೂರು ಶ್ರೀಗಳ ಪೂರ್ವಾಶ್ರಮದ ಮಾತೃಶೀಗಳಾದ ಶ್ರೀಮತಿ ಶಿವನಾಗಮ್ಮನವರು ಲಿಂಗೈಕ್ಯರಾಗಿದ್ದು ಬಹಳ ಬೇಸರದ ಸಂಗತಿ.
ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ.
ಅವರ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/QgjwAU64UO
— Dr. Murugesh R Nirani (@NiraniMurugesh) June 14, 2021
ಉಪ ಮುಖ್ಯಮಂತ್ರಿ ಡಾ.ಸಿ.ಎನ್,ಅಶ್ವತ್ಥನಾರಾಯಣ ಕೂಡಾ ತೀವ್ರ ದುಃಖ ವ್ಯಕ್ಯಪಡಿಸಿದ್ದಾರೆ. ನಾಡಿನ ಮಹೋನ್ನತ ಪೀಠಗಳಲ್ಲಿ ಒಂದಾದ ಸುತ್ತೂರು ಮಠಕ್ಕೆ ತಮ್ಮ ಕುಡಿಯನ್ನು ಧಾರೆಯೆರೆದು; ಧಾರ್ಮಿಕ, ಶೈಕ್ಷಣಿಕ ಮತ್ತು ಜ್ಞಾನ ದಾಸೋಹಕ್ಕೆ ಮೂಲ ಕಾರಣೀಭೂತರಾದ ಮಾತೃಶ್ರೀ ಅವರ ಅಗಲಿಕೆ ತೀವ್ರ ನೋವುಂಟು ಮಾಡಿದೆ. ಶ್ರೀಗಳ ಇಂದಿನ ಮಹೋನ್ನತ ಸಾಧನೆಗಳಿಗೆ ಮಾತೃಶ್ರೀ ಅವರ ಪ್ರೇರೇಪಣೆ ಹಾಗೂ ಅನುಗ್ರಹವೂ ಕಾರಣ ಎಂದು ಡಿಸಿಎಂ ಅವರು ಹೇಳಿದ್ದಾರೆ.
ಮಾತೃಶ್ರೀ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಉಪ ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ.