ಬೆಂಗಳೂರು: ರೇವಣ್ಣ ಕುಟುಂಬದ ಮೇಲಿನ ಪ್ರಕರಣಗಳು ರಾಜಕೀಯ ಪ್ರೇರಿತ ಎಂಬ ಜೆಡಿಎಸ್ ನಾಯಕರ ಹೇಳಿಕೆಗೆ ಗೃಹ ಸಚಿವ ಜಿ.ಪರಮೇಶ್ವರ್ ಎದಿರೇಟು ನೀಡಿದ್ದಾರೆ. ರಾಜಕೀಯ ಪ್ರೇರಿತವೇ ಅಲ್ಲವೇ ಎಂಬ ಬಗ್ಗೆ ತನಿಖೆಯಿಂದ ಗೊತ್ತಾಗಲಿದೆ ಎಂದವರು ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಸೂರಜ್ ರೇವಣ್ಣ ಪ್ರಕರಣ ರಾಜಕೀಯ ಪ್ರೇರಿತವೋ? ಅಲ್ಲವೋ? ಗೊತ್ತಿಲ್ಲ. ಆದರೆ ಇದು ಗಂಭೀರ ಪ್ರಕರಣವಾಗಿರುವುದರಿಂದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ತಿಳಿಸಿದರು.
ದೂರಿನ ಆಧಾರದಲ್ಲಿ ಪೊಲೀಸರು ವಿಚಾರಣೆ ನಡೆಸಿಯೇ ಕ್ರಮ ಕೈಗೊಂಡಿದ್ದಾರೆ ಎಂದು ಬಂಧನ ಕ್ರಮವನ್ನು ಸಮರ್ಥಿಸಿಕೊಂಡಿರುವ ಗೃಹ ಸಚಿವರು, ಈ ಪ್ರಕರಣದಲ್ಲಿ ರಾಜಕೀಯ ದುರುದ್ದೇಶವಿದೆಯೋ ಇಲ್ಲವೋ ಎಂಬುದು ತನಿಖೆಯಿಂದ ಗೊತ್ತಾಗಲಿದೆ ಎಂದರು.