ನವದೆಹಲಿ: ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿ ಸೆಪ್ಟೆಂಬರ್ 21ರಂದು ಕ್ವಾಡ್ ನಾಯಕರ ಶೃಂಗಸಭೆ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ.
ಕ್ವಾಡ್ ನಾಯಕರ ಈ ನಾಲ್ಕನೇ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್21 ರಿಂದ 23ರವರೆಗೆ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮೋದಿ ಪ್ರವಾಸ ಬಗ್ಗೆ ತಿಳಿಸಿದೆ,
ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಸ್ವಗ್ರಾಮದಲ್ಲಿ ಈ ಸಭೆ ಆಯೋಜಿತವಾಗಿದೆ. ಈ ಕ್ವಾಡ್ ಶೃಂಗಸಭೆಯಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್, ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಸಹಿತ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.