ಕೋಲ್ಕತ್ತಾ: ಐಪಿಎಲ್ 2026ರ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ವಿರುದ್ಧ 40 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
Eden Gardens ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 203 ರನ್‌ಗಳ ಸವಾಲಿನ ಮೊತ್ತ ಕಲೆಹಾಕಿತು.
204 ರನ್‌ಗಳ ಗುರಿ ಬೆನ್ನಟ್ಟಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಡೆಲ್ಲಿ ಬೌಲರ್‌ಗಳ ದಾಳಿಗೆ ತತ್ತರಿಸಿ 18.4 ಓವರ್‌ಗಳಲ್ಲಿ 163 ರನ್‌ಗಳಿಗೆ ಸರ್ವಪತನ ಕಂಡಿತು.
ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಗೆ ಗೆಲುವಿನ ವಿದಾಯ ಹೇಳಿದರೆ, ಸೋಲಿನೊಂದಿಗೆ ಕೆಕೆಆರ್ ತಂಡವೂ ಐಪಿಎಲ್ 2026ರ ಅಭಿಯಾನವನ್ನು ಅಂತ್ಯಗೊಳಿಸಿತು.
Curtains down at Eden Gardens for this season! 🏟️
The Kolkata Knight Riders signing off with a lap of honour for a brilliant home crowd 💜#TATAIPL | #KhelBindaas | #KKRvDC | @KKRiders pic.twitter.com/fC29SWpCYe
— IndianPremierLeague (@IPL) May 24, 2026


























































