ನವದೆಹಲಿ: ಹಣವಿಲ್ಲ ಎಂಬ ಕಾರಣಕ್ಕಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪರ್ಧಿಸುತ್ತಿಲ್ಲವಂತೆ.
ಟೈಮ್ಸ್ ನೌ ಶೃಂಗ 2024 ರ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಚುನಾವಣೆಗೆ ಸ್ಪರ್ಧಿಸುವುದಕ್ಕೆ ಬೇಕಾಗಿರುವಷ್ಟು ಹಣ ತಮ್ಮ ಬಳಿ ಇಲ್ಲ. ಹಾಗಾಗಿ ನಾಯಕರು ನೀಡಿದ್ದ ಟಿಕೆಟ್ ಆಫರ್ ನ್ನು ನಿರಾಕರಿಸಿರುವುದಾಗಿ ತಿಳಿಸಿದ್ದಾರೆ.