ಬೆಂಗಳೂರು: ಮಂಡ್ಯ ಜಿಲ್ಲೆ ಕೆರೆಗೋಡಿನಲ್ಲಿ ಹನುಮಧ್ವಜವನ್ನು ಕೆಳಕ್ಕಿಳಿಸಿ ಹರಿದಿರುವುದನ್ನು ಖಂಡಿಸಿ ಮತ್ತು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ವತಿಯಿಂದ ಇಂದು ಬೃಹತ್ ಪ್ರತಿಭಟನೆ ನಡೆಯಿತು. ಇದೇವೇಳೆ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.
ಜೈ ಶ್ರೀರಾಮ್, ಜೈಜೈ ಶ್ರೀರಾಮ್, ಹನುಮಾನ್ ಕೀ ಜೈ, ಹಿಂದೂ ವಿರೋಧಿ ಸರಕಾರಕ್ಕೆ ಧಿಕ್ಕಾರ ಮೊದಲಾದ ಘೋಷಣೆಗಳನ್ನು ಕೂಗಲಾಯಿತು.
ವಿಧಾನ ಪರಿಷತ್ತಿನ ಸದಸ್ಯರಾದ ಡಾ.ತೇಜಸ್ವಿನಿ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ. ರಾಮಮೂರ್ತಿ, ಜನಪ್ರತಿನಿಧಿಗಳು, ಮಾಜಿ ಶಾಸಕರು, ನಗರಪಾಲಿಕೆ ಮಾಜಿ ಸದಸ್ಯರು, ಮುಖಂಡರು, ಕಾರ್ಯಕರ್ತರು ಇದರಲ್ಲಿ ಭಾಗವಹಿಸಿದ್ದರು.
























































