ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣ ಬಗ್ಗೆ ಬಿಜೆಪಿ ಆಕ್ರೋಶ ಹೊರಹಾಕಿದೆ. ಸಂತ್ರಸ್ತರ ಗೋಳನ್ನು ಸರ್ಕಾರ ಕೇಳಲಿಲ್ಲ ಎಂದು ಆರೋಪಿಸಿರುವ ಬಿಜೆಪಿ ನಾಯಕರು ತಾವೇ ಹಸುಮಾಲೀಕರಿಗೆ ಪರಿಹಾರ ನೀಡಿ ಮಾನವೀಯತೆ ಮೆರೆದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರನ್ನೊಳಗೊಂಡ ಬಿಜೆಪಿ ನಿಯೋಗ ಸಂತ್ರಸ್ತರನ್ನು ಭೇಟಿಮಾಡಿ 1 ಲಕ್ಷ ರೂ. ಪರಿಹಾರವನ್ನು ನೀಡಿದ್ದಾರೆ.
ದನದ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಮತ್ತು ಪ್ರತಿಪಕ್ಷ ನಾಯಕರಾದ ಶ್ರೀ @RAshokaBJP ಅವರು ಕಾಟನ್ ಪೇಟೆಯ ದುಂಡು ಮಾರಿಯಮ್ಮ ದೇವಸ್ಥಾನದ ಬಳಿ ಇರುವ ಮಾಲೀಕನ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿ, ಗೋ ಪೂಜೆ ನೆರವೇರಿಸಿ ಪಕ್ಷದ ವತಿಯಿಂದ ಗೋವನ್ನು ಸಂತ್ರಸ್ತರಿಗೆ ನೀಡಿದರು.
— BJP Karnataka (@BJP4Karnataka) January 14, 2025