ಬೆಂಗಳೂರು: ಪೆಟ್ರೋಲ್ ಡೀಸೆಲ್ ದರ ಏರಿಕೆಯ ಬೆನ್ನಲ್ಲೇ ಅಗತ್ಯ ವಸ್ತುಗಳ ಬೆಲೆಯೂ ಗಗನದತ್ತ ಮುಖ ಮಾಡಿದೆ. ಇದರ ಜೊತೆಯಲ್ಲೇ ರಾಜ್ಯದಲ್ಲಿ ಹಾಲಿನ ದರವೂ ಹೆಚ್ಚಳವಾಗಿದೆ.
ಪೆಟ್ರೋಲ್ ದರ ಹೆಚ್ಚಳ ಖಂಡಿಸಿ ಸರಣಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ, ಇದೀಗ ಹಾಲಿನ ದರ ಏರಿಕೆಯ ವಿರುದ್ಧವೂ ಸಿಡಿದೆದ್ದಿದೆ. ಸರ್ಕಾರದ ಕ್ರಮವನ್ನು ಖಂಡಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ತುರ್ತು ಪರಿಸ್ಥಿತಿ ಹೇರಿಕೆಯ ವಾರ್ಷಿಕೋತ್ಸವ ಸಂಭ್ರಮಿಸಲು ಕಾಂಗ್ರೆಸ್ ಸರ್ಕಾರ ನಂದಿನಿ ಹಾಲಿನ ದರವನ್ನ ಲೀಟರ್ ಗೆ ಎರಡು ರೂಪಾಯಿ ಹೆಚ್ಚಳ ಮಾಡಿ ವಿಕೃತ ಸಂತೋಷ ಅನುಭವಿಸುತ್ತಿದೆ ಎಂದು ಲೇವಡಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ, ತಾವು ಅಧಿಕಾರಕ್ಕೆ ಬಂದ ಮೇಲೆ ಕೇವಲ 13 ತಿಂಗಳಿನಲ್ಲಿ ಹಾಲಿನ ದರವನ್ನ ಎರಡು ಬಾರಿ ಹೆಚ್ಚಿಸಿದ್ದೀರಿ. ಕಳೆದ ವರ್ಷ ಆಗಸ್ಟ್ ನಲ್ಲಿ 3 ರೂಪಾಯಿ ಹೆಚ್ಚಳವಾಗಿದ್ದ ಹಾಲಿನ ಬೆಲೆ ಈಗ ಮತ್ತೊಮ್ಮೆ 2 ರೂಪಾಯಿ ಹೆಚ್ಚಾಗಿದೆ. ರಾಜ್ಯದ ಬಡವರು, ಮಾಧ್ಯಮ ವರ್ಗದ ಜನ ಈಗಾಗಲೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಗಗನಕ್ಕೇರಿರುವ ತರಕಾರಿ ಬೆಲೆಗಳಿಂದ ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಾಲಿನ ದರ ಏರಿಸಿ ಮತ್ತೊಮ್ಮೆ ಬಡವರ ಗಾಯದ ಮೇಲೆ ಬರೆ ಎಳೆದಿದ್ದೀರಿ ಎಂದು ಅಶೋಕ್ ಕುಟುಕಿದ್ದಾರೆ.
ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ಅವರು, ‘ನಿಮಗೆ ಬಡವರು, ಮಾಧ್ಯಮ ವರ್ಗದ ಜನರ ಮೇಲೆ ಕಿಂಚಿತ್ತಾದರೂ ಕನಿಕರ ಇದ್ದರೆ, ಈ ಕೂಡಲೇ ಹಾಲಿನ ದರ ಏರಿಕೆ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ.
ತುರ್ತು ಪರಿಸ್ಥಿತಿ ಹೇರಿಕೆಯ ವಾರ್ಷಿಕೋತ್ಸವ ಸಂಭ್ರಮಿಸಲು @INCKarnataka ಸರ್ಕಾರ ನಂದಿನಿ ಹಾಲಿನ ದರವನ್ನ ಲೀಟರ್ ಗೆ ಎರಡು ರೂಪಾಯಿ ಹೆಚ್ಚಳ ಮಾಡಿ ವಿಕೃತ ಸಂತೋಷ ಅನುಭವಿಸುತ್ತಿದೆ.
ಸಿಎಂ @siddaramaiah ನವರೇ, ತಾವು ಅಧಿಕಾರಕ್ಕೆ ಬಂದ ಮೇಲೆ ಕೇವಲ 13 ತಿಂಗಳಿನಲ್ಲಿ ಹಾಲಿನ ದರವನ್ನ ಎರಡು ಬಾರಿ ಹೆಚ್ಚಿಸಿದ್ದೀರಿ. ಕಳೆದ ವರ್ಷ ಆಗಸ್ಟ್… pic.twitter.com/RpF9D4eCwP
— R. Ashoka (ಮೋದಿ ಅವರ ಕುಟುಂಬ) (@RAshokaBJP) June 25, 2024