ಮಂಗಳೂರು,ಸೆ.04: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನನನ್ನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಸಂಪ್ಯ ಪೊಲೀಸ್ ಠಾಣೆ ಎದುರಲ್ಲಿ ಈ ಘಟನೆ ನಡೆದಿದೆ. ಹಿಂಜಾವೇ ತಾಲ್ಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲ (30) ಕೊಲೆಯಾದ ವ್ಯಕ್ತಿ. ಸಂಪ್ಯ ಪೊಲೀಸ್ ಠಾಣೆ ಮುಂಭಾಗ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿತ್ತು. ಈ ನಡುವೆ ಕಾರ್ತಿಕ್ ಮೇರ್ಲ ನನ್ನ ದುಷ್ಕರ್ಮಿಗಳು ಸಾರ್ವಜನಿಕರ ಎದುರೇ ಯುವಕನನ್ನು ಕೊಚ್ಚಿ ಹಾಕಿದ್ದಾರೆ.
ಕಾರ್ತಿಕ್ ಖಾಸಗಿ ಫೈನಾನ್ಸ್ ಸಂಸ್ಥೆಯಿಂದ ಹಣ ಪಡೆದಿದ್ದನು. ಇದೇ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.