ಧಾರವಾಡ: ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ವಿಧಿವಶರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ತಡರಾತ್ರಿ ಧದಾರವಾಡದ ನಿರ್ಮಲಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
1928ರ ಎಪ್ರಿಲ್ 2ರಂದು ಜನಿಸಿದ ಗುರುಲಿಂಗ ಕಾಪಸೆ ಅವರು ತಮ್ಮ 96ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.
ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲೋಣಿ ಬಿಕೆ ಗ್ರಾಮದ ಗುರುಲಿಂಗ ಕಾಪಸೆ ಅವರು ಧಾರವಾಡದ ಸಪ್ತಾಪುರ ದುರ್ಗಾ ಕಾಲೋನಿಯಲ್ಲಿ ವಾಸವಾಗಿದ್ದರು. ಸಾರಸ್ವತ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಅವರು, ಕನ್ನಡ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದರು.