ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ನಾಗೂರು ಕ್ರಾಸ್ ಬಳಿ ಬೈಕ್ ಹಾಗೂ ಟಂಟಂ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದಾರೆ.
ಟಂಟಂ ವಾಹನದಲ್ಲಿದ್ದ ಈರಪ್ಪ ಪವಾಡಗೌಡ (45) ಹಾಗೂ ಬೈಕ್ ಸವಾರ ಅಭಿಷೇಕ್ ಎಂಬಿಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಹುನಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.


























































