ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ತಡರಾತ್ರುಸಂಭವಿಸಿದ ಭೀಕರ ಅಪಘಾತ ಎಂಟು ಮಂದಿಯನ್ನು ಬಲಿತೆಗೆದುಕೊಂಡಿದೆ. ಹುಬ್ವಳ್ಳಿ- ಧಾರವಾಡ ಬೈಪಾಸ್ನ ರೇವಡಿಹಾಳ ಕ್ರಾಸ್ ಬಳಿ ಸೋಮವಾರ ತಡರಾತ್ರಿ ಖಾಸಗಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ.
ಟ್ರಾಕ್ಟರನ್ನು ಓವರ್ಟೇಜ್ ಮಾಡುವ ಸಂದರ್ಭದಲ್ಲಿ ಈ ಎರಡು ವಾಹನಗಳ ನಡುವೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಆರು ಮಂದಿ ಸ್ಥಳದಲ್ಲೇ ಸಾಚನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಸುಮಾರು 27 ಜನರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
























































