ಹುಬ್ಬಳ್ಳಿ: ಕಾಲೇಜು ವಿದ್ಯಾರ್ಥಿನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯದ ಕಾಂಗ್ರೆಸ್ ಆಡಳಿತದಲ್ಲಿ ತುಷ್ಟಿಕರಣ ಹಾಗೂ ಸಮಾಜಘಾತಕ ಶಕ್ತಿಗಳ ಪುಷ್ಟಿಕರಣದಿಂದಾಗಿ ಇಂತಹ ದುರ್ಘಟನೆಗಳು ಸಂಭವಿಸುತ್ತಿವೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಪ್ರೀತಿ ನಿರಾಕರಿಸಿದ್ದಕ್ಕಾಗಿ ಮುಸ್ಲಿಂ ಯುವಕನೊಬ್ಬ ಬಿಜೆಪಿ ಪಾಲಿಕೆ ಸದಸ್ಯರಾದ ನಿರಂಜನ್ ಹಿರೇಮಠ ಅವರ ಪುತ್ರಿ ನೇಹ ಹಿರೇಮಠ ಅವರನ್ನು 9 ಬಾರಿ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಜ್ಯದ ಕಾಂಗ್ರೆಸ್ ಆಡಳಿತದಲ್ಲಿ ತುಷ್ಟಿಕರಣ ಹಾಗೂ ಸಮಾಜಘಾತಕ ಶಕ್ತಿಗಳ ಪುಷ್ಟಿಕರಣದಿಂದಾಗಿ ಇಂತಹ ದುರ್ಘಟನೆಗಳು ಸಂಭವಿಸುತ್ತಿವೆ. ಕಾಂಗ್ರೆಸ್ ಸರ್ಕಾರವು ಈ ಕೂಡಲೇ ಕ್ರಮ ಕೈಗೊಳ್ಳದಿದ್ದಲ್ಲಿ ಸಮಾಜವು ಪ್ರತಿಭಟನೆ ನಡೆಸಲಾಗುವುದು ಎಂದು ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.
ಪ್ರೀತಿ ನಿರಾಕರಿಸಿದ್ದಕ್ಕಾಗಿ ಮುಸ್ಲಿಂ ಯುವಕನೊಬ್ಬ ನಮ್ಮ ಪಾಲಿಕೆ ಸದಸ್ಯರಾದ ನಿರಂಜನ್ ಹಿರೇಮಠ ಅವರ ಪುತ್ರಿ ನೇಹ ಹಿರೇಮಠ ಅವರನ್ನು 9 ಬಾರಿ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಜ್ಯದ ಕಾಂಗ್ರೆಸ್ ಆಡಳಿತದಲ್ಲಿ ತುಷ್ಟಿಕರಣ ಹಾಗೂ ಸಮಾಜಘಾತಕ ಶಕ್ತಿಗಳ ಪುಷ್ಟಿಕರಣದಿಂದಾಗಿ ಇಂತಹ ದುರ್ಘಟನೆಗಳು ಸಂಭವಿಸುತ್ತಿವೆ. ಕಾಂಗ್ರೆಸ್… pic.twitter.com/JUfcvLkwcm
— Pralhad Joshi (Modi Ka Parivar) (@JoshiPralhad) April 19, 2024