ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಅಯ್ಯಪ್ಪ ಸ್ವಾಮಿ ಭಕ್ತರ ಶಿಬಿರದಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ ಅನಾಹುತದಲ್ಲಿ ಮತ್ತೊಬ್ವ ಮೃತಪಟ್ಟಿದ್ದಾರೆ.
ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹುಬ್ಬಳ್ಳಿಯ ಉಣಕಲ್ ನಿವಾಸಿ ಪ್ರಕಾಶ ಬಾರಕೇರ (42) ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.