ಬೆಂಗಳೂರು: ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಜೆಡಿಎಸ್ ನಾಯಕ ಹೆಚ್ಡಿ ರೇವಣ್ಣ ಅವರನ್ನು ಬೆಂಗಳೂರಿನ ನ್ಯಾಯಾಲಯ ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ.
ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಇಂದು ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಧೀಶರು ಅವರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು.
ಕೋರ್ಟ್ ಆದೇಶದ ಹಿನ್ನಲೆ ರೇವಣ್ಣರನ್ನು ಎಸ್ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಒಪ್ಪಿಸಿದ್ದಾರೆ.