ಬೆಂಗಳೂರು: ಕರ್ನಾಟಕ ಹೈಕೋರ್ಟ್‌ಗೆ ನೇಮಕಗೊಂಡಿರುವ ನೂತನ ನ್ಯಾಯಮೂರ್ತಿಗಳು ಪ್ರಮಾಣ ವಚನ ಸ್ವೀಕರಿಸಿದರು. ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡ ರಾಮಚಂದ್ರ ದತ್ತಾತ್ರೇಯ ಹುದ್ದಾರ್ ಹಾಗೂ ವೆಂಕಟೇಶ್ ನಾಯ್ಕ ತಾವರ್ಯನಾಯ್ಕ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ರಾಜಭವನದಲ್ಲಿ ಜರಗಿದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಲೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಸಹಿತ ಅನೇಕ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
© 2020 Udaya News – Powered by RajasDigital.



















































