ಬೆಂಗಳೂರು; ಹಳೆಯ ವರ್ಷಕ್ಕೆ ವಿದಾಯ ಹೇಳಿ ಹೊಸ ವರ್ಷವನ್ನು ಸ್ವಾಗತಿಸಲಾಗಿದೆ. ಈ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅನೇಕರು ಕಾನೂನನ್ನು ಗಾಳಿಗೆ ತೂರಿದ್ದು ಅಂಥವರಿಗೆ ಪೊಲೀಸರು ಕಾನೂನಿನ ಪ್ರಹಾರ ಮಾಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 700ಕ್ಕೂ ಹೆಚ್ಚು ಜನರಿಗೆ ಪೊಲೀಸರು ದಂಡ ವಿಧಿಸಿದ್ದಾರೆ.
ಬೆಂಗಳೂರು ಸಂಚಾರ ವಿಭಾಗದ ಪೊಲೀಸರು ಸುಮಾರು 717 ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣಗಳನ್ನು ದಾಖಲಿಸಿದ್ದಾರೆ. ಬೆಂಗಳೂರಿನ ನಾಲ್ಕು ವಿಭಾಗಗಳಲ್ಲಿ ಕಣ್ಗಾವಲಲ್ಲಿದ್ದ ಪೊಲೀಸರು ಡಿಸೆಂಬರ್ 30 ರವರೆಗೆ 27,280 ಕ್ಕೂ ಹೆಚ್ಚು ವಾಹನಗಳನ್ನು ಪರಿಶೀಲಿಸಿದ್ದಾರೆ. ಈ ಪೈಕಿ 717 ಚಾಲಕರ ಮೇಲೆ ಪ್ರಕರಣ ದಾಖಲಿಸಲಾಗಿದೆ.