ಚಂಡೀಗಢ: ಹರಿಯಾಣ ಸರ್ಕಾರ, ಚಂಡೀಗಢ ಆಡಳಿತ ಸೇರಿದಂತೆ ವಿವಿಧ ಖಾತೆಗಳಿಂದ ₹645 ಕೋಟಿ ಸಾರ್ವಜನಿಕ ಹಣ ದುರ್ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ED) ಐಡಿಎಫ್‌ಸಿ ಫಸ್ಟ್ ಬ್ಯಾಂಕ್‌ನ ಇಬ್ಬರು ಮಾಜಿ ಉದ್ಯೋಗಿಗಳನ್ನು ಬಂಧಿಸಿದೆ. ಬಂಧಿತ ಆರೋಪಿಗಳನ್ನು ವಿಶೇಷ ಪಿಎಂಎಲ್‌ಎ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಮೇ 21ರವರೆಗೆ 10 ದಿನಗಳ ಇಡಿ ವಶಕ್ಕೆ ಒಪ್ಪಿಸಲಾಗಿದೆ.
ಚಂಡೀಗಢ ವಲಯ ಕಚೇರಿಯ ಇಡಿ ಅಧಿಕಾರಿಗಳು ಸೋಮವಾರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ರಿಭವ್ ರಿಷಿ ಹಾಗೂ ಅಭಯ್ ಕುಮಾರ್ ಅವರನ್ನು ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಎರಡು ಖಾಸಗಿ ಶಾಲೆಗಳ ಬ್ಯಾಂಕ್ ಖಾತೆಗಳಿಂದ ₹645 ಕೋಟಿ ಸಾರ್ವಜನಿಕ ಹಣ ದುರ್ಬಳಕೆಯಾಗಿರುವುದು ಬೆಳಕಿಗೆ ಬಂದಿದೆ. ಶೆಲ್ ಸಂಸ್ಥೆಗಳ ಮೂಲಕ ನೂರಾರು ಕೋಟಿ ರೂಪಾಯಿ ಹಣವನ್ನು ವಿವಿಧ ಸರ್ಕಾರಿ ಖಾತೆಗಳಿಂದ ಅಕ್ರಮವಾಗಿ ವರ್ಗಾಯಿಸಿ, ಬಳಿಕ ಹಲವು ಹಂತಗಳಲ್ಲಿ ಹಣ ವರ್ಗಾವಣೆ ನಡೆಸಲಾಗಿದೆ ಎಂದು ಇಡಿ ತಿಳಿಸಿದೆ.
























































