ಉಡುಪಿ: ದೇಶದಾದ್ಯಂತ 100 ಕೋಟಿಗೂ ಅಧಿಕ ಕೋವಿಡ್ ಲಸಿಕಾ ಡೋಸ್ ವಿತರಣೆಗೈದು ಭಾರತ ವಿಶ್ವ ದಾಖಲೆಗೈದಿರುವ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶಾಸಕ ಕೆ ರಘುಪತಿ ಭಟ್ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡರು.
ಭಾರತವು 100 ಕೋಟಿ ಲಸಿಕೆಗಳನ್ನು ನೀಡುವ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿಿ ಅವರ ಇಚ್ಚಾಶಕ್ತಿಯಿಂದ ಸಾಧಿಸಿದೆ ಎಂದರು. ಈ ಸಾಧನೆಗೆ ಅಭಿನಂದನೆ ಸಲ್ಲಿಸಿದ ಅವರು ಕೋವಿಡ್ ಹೋರಾಟದಲ್ಲಿ ಸಂಘಟಿದ ಪ್ರಯತ್ನದಿಂದ ಈ ಸಾಧನೆಗೆ ಶ್ರಮಿಸಿದ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಸ್ವಯಂಸೇವಕರನ್ನು ಅಭಿನಯಿಸಿದರು.
ಈ ಸಂದರ್ಭದಲ್ಲಿ ವೈದ್ಯರು, ಶುಶ್ರೂಷಕರು ಹಾಗೂ ಆಶಾ ಕಾರ್ಯಕರ್ತರನ್ನು ಸನ್ಮಾನಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಕೋಷ್ಠದ ಸಂಚಾಲಕರಾದ ಶ್ರೀನಿಧಿ ಹೆಗ್ಡೆ, ಜಿಲ್ಲಾ ಬಿಜೆಪಿ ವಕ್ತಾರರಾದ ಗುರುಪ್ರಸಾದ್, ಸಹ ವಕ್ತಾರರಾದ ಶಿವಕುಮಾರ್ ಉಪಸ್ಥಿತರಿದ್ದರು.



























































