ರೈಲ್ವೆ ನೇಮಕಾತಿ ಮಂಡಳಿ (RRB) 2026ರ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಘೋಷಿಸಿದೆ. ದೇಶಾದ್ಯಂತ 11,127 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆಯಾಗಿದೆ.
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು. ಜೊತೆಗೆ ಫಿಟ್ಟರ್, ಎಲೆಕ್ಟ್ರಿಷಿಯನ್, ಮೆಕ್ಯಾನಿಕ್, ಡೀಸೆಲ್ ಎಂಜಿನ್ ಮುಂತಾದ ಸಂಬಂಧಿತ ಟ್ರೇಡ್‌ಗಳಲ್ಲಿ ಐಟಿಐ ಪೂರೈಸಿರಬೇಕು.
ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಡಿಪ್ಲೊಮಾ ಅಥವಾ ಪದವಿ ಹೊಂದಿರುವವರಿಗೂ ಅರ್ಜಿ ಸಲ್ಲಿಸಲು ಅವಕಾಶವಿದೆ.
ವಯೋಮಿತಿ: ALP ಹುದ್ದೆಗೆ 18ರಿಂದ 30 ವರ್ಷ ವಯೋಮಿತಿ ನಿಗದಿಯಿದೆ. ಮೀಸಲಾತಿ ವರ್ಗಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಅನ್ವಯವಾಗಲಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ ಆಯೋಗದ ಲೆವಲ್–2 ಅಡಿ, ₹19,900 ಮೂಲ ವೇತನ ಜೊತೆಗೆ ಎಚ್‌ಆರ್‌ಎ, ಡಿಎ ಸೇರಿದಂತೆ ಇತರೆ ರೈಲ್ವೆ ಸೌಲಭ್ಯಗಳು ದೊರೆಯಲಿವೆ.
ಅರ್ಜಿ ಸಲ್ಲಿಸಲು ಕೊನೆಯ ದಿನ:
ಆನ್‌ಲೈನ್ ಅರ್ಜಿ ಪ್ರಕ್ರಿಯೆ 2026ರ ಮೇ 15ರಿಂದ ಪ್ರಾರಂಭ. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 14, 2026.
ಅಭ್ಯರ್ಥಿಗಳು ಅಧಿಕೃತ ಜಾಲತಾಣ rrbapply.gov.in ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದು. ಅರ್ಜಿ ಸಲ್ಲಿಸುವ ಮುನ್ನ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುವಂತೆ RRB ಸೂಚಿಸಿದೆ.
















































