ಮುಂಬಯಿ: ಮಹಾರಾಷ್ಟ್ರದಲ್ಲಿ ಮಹಾ ಮಳೆ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಭೂಕುಸಿತ, ಅವಘಡ, ಪ್ರವಾಹಗಳಲ್ಲಿ ಸಿಲುಕಿ ಮತ್ತೆ 30ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ಕೆಲವು ದಿನಗಳಿಂದ ರಾಯಘಡ ಸಹಿತ ಮಹಾರಾಷ್ಟ್ರದ ವಿವಿಧ ಜಿಲ್ಲೆಗಳ ಮಳೆ ಸಂಬಂಧಿತ ಸರಣಿ ದುರ್ಘಟನೆಗಳು ಸಂಭವಿಸುತ್ತಲೇ ಇವೆ. ರಾಯಘಡ ಜಿಲ್ಲೆಯಲ್ಲಿ 35ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
ಕೊಂಕಣ ಪ್ರದೇಶವೂ ಸರಣಿ ಅನಾಹುತಗಳಿಗೆ ಸಾಕ್ಷಿಯಾಗಿವೆ. ಭೂಕುಸಿತದಲ್ಲಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ನಡುವೆ ಮಹಾರಾಷ್ಟ್ರದಲ್ಲಿ ಈ ಬಾರಿಯ ಮಹಾಮಳೆಗೆ ಬಲಿಯಾದವರ ಸಂಖ್ಯೆ 60 ದಾಟಿದೆ ಎನ್ನಲಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಲ್ಬಣಗೊಂಡಿದ್ದು ಜನಜೀವನ ತತ್ತರಗೊಂಡಿದೆ.