ಬೆಂಗಳೂರು: ಬೆಂಗಳೂರಿನ ಆರ್ ವಿ ಶಿಕ್ಷಕರ ಕಾಲೇಜಿನ ಸಭಾಂಗಣದಲ್ಲಿ ದಿವಂಗತ ಅನಂತಕುಮಾರ್ ಅವರ 3 ನೇ ಪುಣ್ಯತಿಥಿಯ ಸ್ಮರಣಾರ್ಥ ಆಯೋಜಿಸಲಾಗಿದ್ದ ಅನಂತಕುಮಾರ್ ಸ್ಮಾರಕ ಉಪನ್ಯಾಸದಲ್ಲಿ ವರ್ಚುಯಲ್ ಆಗಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ದಿವಂಗತ ಅನಂತಕುಮಾರ್ ಅವರೊಂದಿಗೆ ತಮಗಿದ್ದ ಆತ್ಮೀಯ ಕ್ಷಣಗಳನ್ನು ಹಂಚಿಕೊಂಡರು,
ದೇಶದಲ್ಲಿ ಸಾಗಾಣಿಕೆ ವೆಚ್ಚ ಹೆಚ್ಚಿದೆ. ಇದನ್ನ ಕಡಿಮೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ಅಂತರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ. ಅದೇ ರೀತಿಯಲ್ಲಿ ಒಳನಾಡು ಜಲಸಾರಿಗೆಗೆ ಮಾರ್ಗಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.
ಅನಂತಕುಮಾರ್ ಅವರ ಬಹುದಿನಗಳ ಕನಸಾಗಿದ್ದ ಬೆಂಗಳೂರು ರಿಂಗ್ ರಸ್ತೆಯ ನಿರ್ಮಾಣದ ಬಗ್ಗೆ ಈಗಾಗಲೇ ಚರ್ಚೆಯನ್ನು ನಡೆಸಲಾಗಿದೆ. ಚುನಾವಣೆಯ ನೀತಿ ಸಂಹಿತೆಯ ನಂತರ ಕರ್ನಾಟಕ ರಾಜ್ಯಕ್ಕೆ ಆಗಮಿಸಲಿದ್ದು ರಿಂಗ್ ರಸ್ತೆಯ ಕಾಮಗಾರಿ ಪ್ರಾರಂಭದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಅದಮ್ಯ ಚೇತನ ಮುಖ್ಯಸ್ಥೆ ಡಾ ತೇಜಸ್ವಿನಿ ಅನಂತಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.