ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆ ಪಹಲ್ಗಾಮ್ ಬಳಿ ಉಗ್ರರು ಮಂಗಳವಾರ ನಡೆಸಿದ ಪೈಶಾಚಿಕ ದಾಳಿಯಲ್ಲಿ 26 ಮಂದಿ ಬಲಿಯಾಗಿದ್ದಾರೆ. ನಬೈಸರನ್ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಹಿಂದೀಗಳನ್ನೇ ಗುರಿಯಾಗಿಸಿ ಈ ದಾಳಿ ನಡೆದಿದೆ.
ಪ್ರವಾಸಿಗರ ಗುಂಪಿನತ್ತ ಲಗ್ಗೆ ಹಾಕಿ ಧರ್ಮದ ಯಾವುದೆಂದು ತಿಳಿದು, ಹಿಂದೂಗಳಾಗಿದ್ದಲ್ಲಿ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಕುಟುಂಬ ಸಮೇತರಾಗಿ ತೆರಳಿದ್ದವರಲ್ಲಿ ಗಂಡಸರನ್ನು ಮಾತ್ರ ಕೊಲೆ ಮಾಡಿ ಪತ್ನಿ, ಮಕ್ಕಳನ್ನು ಅನಾಥರಾಗಿಸಿದ್ದಾರೆ. ಭಾರತದ ಇತಿಹಾಸದಲ್ಲಿ ಕಂಡು ಕೇಳರಿಯದ ಭೀಕರ ಕೃತ್ಯ ಇದಾಗಿದೆ.
ಕಣಿವೆಗಳಿಂದ ಕೂಡಿದ ಸುಂದರ ಪ್ರವಾಸಿ ತಾಣದಲ್ಲಿ ಮರಗಳ ನಡುವಿನಿಂದ ನುಸುಳಿ ಬಂದ ಉಗ್ರರು, ಪ್ರವಾಸಿಗರ ರಕ್ತದೋಕುಳಿ ಹರಿಸಿದ್ದಾರೆ. ಕರ್ನಾಟಕ, ಆಂಧ್ರ, ಒಡಿಶಾ ಸೇರಿದಂತೆ ವಿವಿಧ ಕಡೆಗಳಿಂದ ಪ್ರವಾಸಕ್ಕೆ ತೆರಳಿದ್ದ 28 ಮಂದಿ ಬಲಿಯಾಗಿದ್ದಾರೆ. ಇಬ್ಬರು ವಿದೇಶಿಗರೂ ಉಗ್ರರ ದಾಳಿಗೆ ಬಲಿಯಾಗಿದ್ದಾರೆ.