ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ವಹಿಸಿಕೊಂಡು ಇಂದಿಗೆ ಆರು ತಿಂಗಳು ಪೂರೈಸಿದೆ. ಇದೇ ದಿನದಂದು ಅವರು ಹುಟ್ಟು ಹಬ್ಬ ಆಚರಿಸುತ್ತಿದ್ದಾರೆ.
ಈ ಎರಡೂ ಸಂಭ್ರಮದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಬಾಲಬ್ರುಯಿ ಅಥಿತಿ ಗೃಹ ಪಕ್ಕದಲ್ಲಿ ಇರುವ ಆಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ರಾಜ್ಯದ ಜನರಿಗೆ ಒಳ್ಳೆಯದು ಮಾಡಲಿ ಎಂದು ಪೂಜೆ ಸಲ್ಲಿಸಿದರು.
ಸಚಿವರಾದ ಬಿ.ಎ.ಬಸವರಾಜ (ಬೈರತಿ), ಶಂಕರ್ ಪಾಟೀಲ ಮುನೇನಕೊಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.