ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ರ ಎರಡು ಮತ್ತು ಮೂರನೇ ವರದಿಗಳನ್ನು ಆಯೋಗದ ಅಧ್ಯಕ್ಷರಾದ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಸಲ್ಲಿಸಿದರು.
ವರದಿಯ ಮುಖ್ಯಾಂಶಗಳ ಮಾಹಿತಿ ಪಡೆದ ಮುಖ್ಯಮಂತ್ರಿಗಳು ವರದಿಯಲ್ಲಿ ಮಾಡಿರುವ ಶಿಫಾರಸುಗಳನ್ನು ಪರಿಶೀಲಿಸಿ, ಕೂಡಲೇ ಜಾರಿಗೊಳಿಸಲು ಸಾಧ್ಯವಿರುವ ಅಂಶಗಳನ್ನು ಅನುಷ್ಠಾನಕ್ಕೆ ತರಲು ಕ್ರಮ ವಹಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು.
ಶುಕ್ರವಾರ ಸಲ್ಲಿಸಿದ ವರದಿಯು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಇಂಧನ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಅಭಿವೃದ್ಧಿ, ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ಒಳಾಡಳಿತ ಇಲಾಖೆಗಳಿಗೆ ಸಂಬಂಧಿಸಿದ ಶಿಫಾರಸುಗಳನ್ನು ಒಳಗೊಂಡಿದೆ.
ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.