ಬೆಂಗಳೂರು: ಕಾಂಗ್ರೆಸ್ ನಾಯಕರು ನಡೆಸಲುದ್ದೇಶಿಸಿರುವ ‘ಸಿದ್ದರಾಮೋತ್ಸವ ಶಕ್ತಿ ಪ್ರದರ್ಶನ’ ಬಗ್ಗೆ ಲೇವಡಿ ಮಾಡಿರುವ ಬಿಜೆಪಿ, ಇದು ಸಿದ್ದುಹಾಸ್ಯೋತ್ಸವ’ವಾಗಲಿದೆ ಎಂದಿದೆ.
ಸರಣಿ ಟ್ಚೀಟ್ ಮಾಡಿರುವ ಬಿಜೆಪಿ, ‘ತಾನೇ ಮುಂದಿನ ಸಿಎಂ ಎಂದು ಬಿಂಬಿಸಿಕೊಳ್ಳಲು ತನ್ನದೇ ಪಟಾಲಂ ಜೊತೆಗೂಡಿ ವ್ಯಕ್ತಿ ಪೂಜೋತ್ಸವ ಮಾಡಿದರೆ ಅದನ್ನು ಶಕ್ತಿ ಪ್ರದರ್ಶನ ಎನ್ನುವುದಿಲ್ಲ, ಅದು ಉತ್ತರಕುಮಾರನ ಪೌರುಷ ಅಷ್ಟೇ ಎಂದಿದೆ.
ತಾನೇ ಮುಂದಿನ ಸಿಎಂ ಎಂದು ಬಿಂಬಿಸಿಕೊಳ್ಳಲು ತನ್ನದೇ ಪಟಾಲಂ ಜೊತೆಗೂಡಿ ವ್ಯಕ್ತಿ ಪೂಜೋತ್ಸವ ಮಾಡಿದರೆ ಅದನ್ನು ಶಕ್ತಿ ಪ್ರದರ್ಶನ ಎನ್ನುವುದಿಲ್ಲ, ಅದು ಉತ್ತರಕುಮಾರನ ಪೌರುಷ ಅಷ್ಟೇ.
ತಾಕತ್ತು ಅನ್ನುವುದಿದ್ದರೆ ಈಗಲೇ ಡಿಕೆಶಿ ವಿರುದ್ಧ ಸೆಟೆದು ನಿಲ್ಲಿ, ರಾಜಕೀಯ ಸಂದಿಗ್ಧತೆ ತಂದಿಡುವುದು ಸಾಮರ್ಥ್ಯವೇ?#ಸಿದ್ದುಹಾಸ್ಯೋತ್ಸವ
— BJP Karnataka (@BJP4Karnataka) July 2, 2022
ತಾಕತ್ತು ಅನ್ನುವುದಿದ್ದರೆ ಈಗಲೇ ಡಿಕೆಶಿ ವಿರುದ್ಧ ಸೆಟೆದು ನಿಲ್ಲಿ, ರಾಜಕೀಯ ಸಂದಿಗ್ಧತೆ ತಂದಿಡುವುದು ಸಾಮರ್ಥ್ಯವೇ? ಎಂದು ಪ್ರಶ್ನಿಸಿರುವ ಕಮಲ ಪಕ್ಷ, ‘ಆ ಭಾಗ್ಯ, ಈ ಭಾಗ್ಯ ಎಂದು ಘೋಷಣೆ ಮಾಡಿದ್ದೇ ಬಂತು, ಜನಪ್ರಿಯತೆ, ಪ್ರಚಾರಕ್ಕಾಗಿ ಮಾಡಿದ ಯಾವ ಕಾರ್ಯವೂ ಈಗ ಸಿದ್ದರಾಮಯ್ಯರ ಸಹಾಯಕ್ಕೆ ಬರುತ್ತಿಲ್ಲ. ಹಲವು ಬಿಟ್ಟಿ ಭಾಗ್ಯ ನೀಡಿದ ಸಿದ್ದರಾಮಯ್ಯಗೆ ಈಗ ಕ್ಷೇತ್ರ ಭಾಗ್ಯದ ಫಲಾನುಭವಿಯಾಗಲು ಸಾಧ್ಯವಾಗುತ್ತಿಲ್ಲ. ಇದಕ್ಕಿಂತ ನಾಚಿಗಗೇಡಿನ ಸಂಗತಿ ಮತ್ತೊಂದಿದೆಯೇ? ಎಂದಿದೆ.
ಸಿದ್ದರಾಮೋತ್ಸವದ ಬಳಿಕ ಕಾಂಗ್ರೆಸ್ ಮತ್ತಷ್ಟು ಖಾಲಿಯಾಗಲಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಸಿದ್ದರಾಮಯ್ಯ ಅವರು ನಾಂದಿ ಹಾಡುತ್ತಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿ ಎಂದು ಸಿದ್ದರಾಮಯ್ಯ ಹೆಸರು ಘೋಷಿಸದೇ ಇದ್ದಲ್ಲಿ, ಆರು ಪಕ್ಷ ಬಿಟ್ಟು ಬಂದಿರುವ ಸಿದ್ದರಾಮಯ್ಯ ಅವರಿಗೆ ಏಳನೇ ಬಾರಿ ಪಕ್ಷಾಂತರ ಮಾಡುವುದು ಕಷ್ಟವೇ? ಎಂದೂ ಬಿಜೆಪಿ ಪ್ರಶ್ನಿಸಿದೆ.
‘ಆ ಧರ್ಮರಾಯನ ಹಿಂದೆಯೇ ಯಾರೂ ಬರಲಿಲ್ಲ, ನಿಮ್ಮಂತಹ ಅಧರ್ಮರಾಯನ ಹಿಂದೆ ಯಾರು ತಾನೇ ನಿಲ್ಲಬಲ್ಲರು? ನಿಮ್ಮ ಉತ್ಸವ ನಾಲ್ಕು ಕುರ್ಚಿಗಳನ್ನು ತುಂಬಬಹುದೇ ಹೊರತು, ನಾಲ್ಕು ಸೀಟುಗಳನ್ನು ಗಳಿಸಿಕೊಡದು. ಮೂಲ ಕಾಂಗ್ರೆಸ್ಸಿಗರು ನಿಮ್ಮಿಂದಾಗಿಯೇ ಪಕ್ಷ ತೊರೆಯುತ್ತಿರುವುದು ನಿಜವಲ್ಲವೇ?’ ಎಂದು ಪ್ರಶ್ನಿಸಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ಕೆಣಕಿದೆ.





















































