ಬೆಂಗಳೂರು: ಉಡುಪಿ ಜಿಲ್ಲೆ ಶಿರೂರು ಬಳಿ ಆಂಬ್ಯುಲೆನ್ಸ್ ಅಫಘಾತ ನಂತರ ಇದೀಗ ಆ ಭಾಗದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಡ ಹೆಚ್ಚಾಗಿದೆ. ಈ ಆಗ್ರಹಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೂಡಾ ಧ್ವನಿಗೂಡಿಸಿದ್ದಾರೆ.
ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ & ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ ಬಿಜೆಪಿ ಸರ್ಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು ಎಂದು ಅವರು ಸಲಹೆ ಮಾಡಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಹೆಚ್ಡಿಕೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಸುಧಾಕರ್ ಅವರೇ ಖುದ್ದು ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತಂತೆ ಪ್ರತಿಕ್ರಿಯಿಸಿರುವ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಅವಶ್ಯಕತೆ ಇದೆ ಎಂಬ ಸಾರ್ವಜನಿಕರ ಬೇಡಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ್ದೇನೆ. ಕಾರವಾರದ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ ಹಾಗೂ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿ ಜೊತೆ ಚರ್ಚಿಸಿ ಶೀಘ್ರವೇ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಕಾರವಾರದ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ ಹಾಗೂ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿ ಶ್ರೀ @BSBommai ಅವರೊಂದಿಗೆ ಚರ್ಚಿಸಿ ಶೀಘ್ರವೇ ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ನೀಡುತ್ತಿದ್ದೇನೆ.
2/3
— Dr Sudhakar K (@mla_sudhakar) July 25, 2022
;




















































