ಬೆಂಗಳೂರು: 40% ಕಮಿಷನ್ ಆರೋಪ ಕುರಿತಂತೆ ತನಿಖೆಗೆ ನ್ಯಾ. ನಾಗಮೋಹನ್ ದಾಸ್ ಆಯೋಗಕ್ಕೆ ಮತ್ತೆ 6 ವಾರಗಳ ಕಾಲಾವಕಾಶ ನೀಡಿ ಹೈಕೋರ್ಟ್ ಆದೇಶಿಸಿದೆ. ಬಿಬಿಎಂಪಿ ಹಾಗೂ ವಿವಿಧ ಇಲಾಖೆಗಳ ಗುತ್ತಿಗೆ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ವಿಚಾರಣೆ ನಡೆಸಿ ವರದಿ ಸಲ್ಲಿಸಲು ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗಕ್ಕೆ ಹೈಕೋರ್ಟ್ ಮತ್ತೆ ಆರು ವಾರಗಳ ಗಡುವು ವಿಸ್ತರಿಸಿದೆ.
ಭಾರೀ ಅಕ್ರಮ ಕುರಿತ ತನಿಖೆಗಾಗಿ ರಾಜ್ಯ ರಾಜ್ಯ ಸರ್ಕಾರವು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಆಯೋಗವನ್ನು ರಚಿಸಿತ್ತು. ಸರ್ಕಾರದ ಆದೇಶ ಪ್ರಶ್ನಿಸಿ ವಿವಿಧ ಗುತ್ತಿಗೆ ಕಂಪೆನಿಗಳು ಸಲ್ಲಿಸಿದ್ದ ಅರ್ಜಿ ಕುರಿತಂತೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು, ಇದೇ ಪೀಠ ಈ ಹಿಂದೆ ನೀಡಿದ್ದ ಆದೇಶವನ್ನು ಪಾಲಿಸದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತು. ಈವರೆಗೂ ವಿಚಾರಣೆಯೇ ಆರಂಭವಾಗಡಿರುವ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿತು. ಇದೇ ವೇಳೆ, ಅಡ್ವೋಕೇಟ್ ಜನರಲ್ ಮನವಿ ಮೇರೆಗೆ ನ್ಯಾಯಪೀಠ ಮತ್ತೆ ಆರು ವಾರ ಕಾಲಾವಾಶ ನೀಡಿತು.




























































