ಲೋಕಸಭೆ ಮತ್ತು ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಭಾರತೀಯ ಜನತಾ ಪಕ್ಷವು ಪದಾಧಿಕಾರಿಗಳ ಪಟ್ಟಿಯಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ. ನೂತನ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ಇದೆ ಇದೇ ವೇಳೆ ಆರೆಸ್ಸೆಸ್ ಹಿರಿಯ ನಾಯಕ ಬಿ.ಎಲ್. ಸಂತೋಷ್ ಅವರನ್ನು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಹಾಗೂ ಶಿವ ಪ್ರಕಾಶ್ ಅವರನ್ನು ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿಯನ್ನಾಗಿ ಮುಂದುವರೆಸಲಾಗಿದೆ.
ಇವರೇ ನೂತನ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು:
-
ಅರುಣ್ ಸಿಂಗ್,
-
ಕೈಲಾಶ್ ವಿಜಯ್ ವರ್ಗೀಯ,
-
ದುಷ್ಯಂತ ಕುಮಾರ್ ಗೌತಮ್,
-
ತರುಣ್ ಚುಗ್,
-
ವಿನೋದ್ ತಾವ್ಡೆ,
-
ಸುನಿಲ್ ಬನ್ಸಲ್,
-
ರಾಧಾಮೋಹನ್ ಅಗರ್ವಾಲ್,
-
ಬಂಡಿ ಸಂಜಯ್ ಕುಮಾರ್
ಉಪಾಧ್ಯಕ್ಷರು ಸೇರಿದಂತೆ ನೂತನ ಪದಾಧಿಕಾರಿಗಳ ಪಟ್ಟಿ ಹೀಗಿದೆ.
भाजपा राष्ट्रीय अध्यक्ष श्री @JPNadda ने निम्नलिखित केंद्रीय पदाधिकारियों के नामों की घोषणा की है- pic.twitter.com/0aaArxHF30
— BJP (@BJP4India) July 29, 2023
ಈ ನಡುವೆ ಈ ವರೆಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಿಟಿ ರವಿ ಅವರಿಗೆ ಉನ್ನತ ಹುದ್ದೆ ನೀಡಲು ಪಕ್ಷದ ವರಿಷ್ಠರು ತೀರ್ಮಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನ ಕಾರ್ಯದರ್ಶಿ ಸ್ಥಾನದ ಜವಾಬ್ಧಾರಿಯಿಂದ ಸಿ.ಟಿ.ರವಿ ಅವರನ್ನು ಮುಕ್ತಗೊಳಿಸಲಾ ಗುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.






















































