ಧಾರವಾಡ: ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿಗೆ ಮರಳಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಪಕ್ಷದ ಹೈಕಮಾಂಡ್ ಸೂಚಿಸಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ.
ಧಾರವಾಡ ಕ್ಷೇತ್ರ ಸೇರಿದಂತೆ ರಾಜ್ಯದ ಯಾವುದೇ ಸಂಸದೀಯ ಸ್ಥಾನಕ್ಕೆ ಸ್ಪರ್ಧಿಸಲು ಸಿದ್ಧ ಎಂದು ಶೆಟ್ಟರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮ್ಮಂಡ್ ತಮ್ಮನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡದಿದ್ದಲ್ಲಿ ಪಕ್ಷಕ್ಕಾಗಿ ತನ್ನ ಪ್ರಯತ್ನ ಮುಂದುವರಿಸುತ್ತೇನೆ ಎಂದು ತಿಳಿಸಿದರು.
ಪ್ರಸ್ತುತ ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಕಾನೂನು ಸಚಿವ ಪ್ರಲ್ಹಾದ ಜೋಶಿ ಅವರು ಹೊಂದಿರುವ ಧಾರವಾಡ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಇದೀಗ ಬಿಜೆಪಿಗೆ ಮರಳಿರುವ ಜಗದೀಶ್ ಶೆಟ್ಟರ್ ಅವರು ಕೂಡಾ ಇದೇ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗುತ್ತಿದೆ. ಇದೀಗ ತಾವು ಕೂಡಾ ಲೋಕಸಭಾ ಚುನಾವಣಾ ಟಿಕೆಟ್ ಆಕಾಂಕ್ಷಿ ಎಂಬ ಸಂದೇಶವನ್ನು ಶೆಟ್ಟರ್ ರವಾನಿಸಿದ್ದಾರೆ.