ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೆಸರು ಹೇಳುವಂತೆ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಕಲ್ಲೇಶಪ್ಪ ಅವರ ಮೇಲೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕರು, ಸಚಿವರು ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ವಿಧಾನಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದ ಕಾಂಗ್ರೆಸ್ ನಾಯಕರು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳ ವಿರುದ್ದ ಆಕ್ರೋಶ ಹೊರಹಾಕಿದರು.
ಪ್ರತಿಭಟನೆಯಲ್ಲಿ ಸಚಿವರಾದ ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಭೋಸ್‍ರಾಜ್, ಎಂ.ಬಿ.ಪಾಟೀಲ್, ಪ್ರಿಯಾಂಕ್ ಖರ್ಗೆ ಶರಣ ಪ್ರಕಾಶ್ ಪಾಟೀಲ್ ಸೇರಿದಂತೆ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಿದ್ದರು..