ಬೆಂಗಳೂರು: 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆ ಸಂಬಂಧ ಹೈಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ.
ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿನ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ 5, 8, 9, 11 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಿಗದಿಪಡಿಸಿಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನರಹಿತ ಶಾಲೆಗಳ ಸಂಘ ಹೈಕೋರ್ಟ್ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ನ್ಯಾಯಪೀಠ ಈ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿ ಆದೇಶಿಸಿದೆ.