ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಭಾನುವಾರ ಕರ್ನಾಟಕ ಸೇರಿದಂತೆ 8 ರಾಜ್ಯಗಳ ಅಭ್ಯರ್ಥಿಗಳ 5ನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿರುವ ಬಿಜೆಪಿ, ಬೆಳಗಾವಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಉತ್ತರ ಕನ್ನಡಕ್ಕೆ ಸಂಸದ ಅನಂತಕುಮಾರ್ ಹೆಗಡೆ ಬದಲಿಗೆ ಬೇರೆ ಹುರಿಯಾಳು ಹೆಸರಿದೆ.
ಕರ್ನಾಟಕದ 5ನೇ ಪಟ್ಟಿ ಹೀಗಿದೆ:
-
ಉತ್ತರ ಕನ್ನಡ : ವಿಶ್ವೇಶ್ವರ ಹೆಗಡೆ ಕಾಗೇರಿ
-
ಚಿಕ್ಕಬಳ್ಳಾಪುರ : ಡಾ.ಕೆ.ಸುಧಾಕರ್
-
ಬೆಳಗಾವಿ ಲೋಕಸಭಾ ಕ್ಷೇತ್ರ: ಜಗದೀಶ್ ಶೆಟ್ಟರ್.
-
ರಾಯಚೂರು : ರಾಜಾ ಅಮರೇಶ್ವರ ನಾಯಕ