ನವದೆಹಲಿ: ಕೇಂದ್ರದಲ್ಲಿ ಎನ್‌ಡಿಎ ಸರ್ಕಾರಮತ್ತೆ ಅಧಿಕಾರಕ್ಕೆ ಬಂದಿದ್ದು, ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಧಾನಿ ಸೇರಿದಂತೆ 73 ಮಂದಿಯನ್ನೊಳಗೊಂಡ ಸಂಪುಟ ಅಸ್ತಿತ್ವಕ್ಕೆ ಬಂದಿದ್ದು, ಈ ಪೈಕಿ 7 ಮಂದಿ ಮಾಜಿ ಮುಖ್ಯಮಂತ್ರಿಗಳಾಗಿದ್ದವರು.
ಪ್ರಧಾನಿ ನರೇಂದ್ರ ಮೋದಿಯವರು ಹಿಂದೆ ಗುಜರಾತ್ ಸಿಎಂ ಆಗಿದ್ದವರು. ಇನ್ನುಳಿದಂತೆ ಎಚ್.ಡಿ.ಕುಮಾರಸ್ವಾಮಿ (ಕರ್ನಾಟಕ), ಸಿಂಗ್(ಉತ್ತರ ಪ್ರದೇಶ), ಶಿವರಾಜ್ ಸಿಂಗ್ ಚೌಹಾಣ್ (ಮಧ್ಯಪ್ರದೇಶ), ಮನೋಹರ್ ಲಾಲ್ ಖಟ್ಟರ್ (ಹರಿಯಾಣ), ಸರ್ಬಾನಂದ ಸೋನೋವಾಲ್ (ಅಸ್ಸಾಂ), ಜಿತನ್ ರಾಮ್ ಮಾಂಝಿ (ಬಿಹಾರ) ಅವರು ಮೋದಿ ಕ್ಯಾಬಿನೆಟ್‌ಲ್ಲಿದ್ದಾರೆ. ಇವರಲ್ಲಿ ಐವರು ಬಿಜೆಪಿಯವರಾಗಿದ್ದು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಜಿತನ್ ರಾಮ್ ಮಾಂಝಿ ಮಿತ್ರಪಕ್ಷಗಳ ಸಂಸದರಾಗಿದ್ದರೆ.
ಈ ನಡುವೆ, ಕರ್ನಾಟಕದಿಂದ ಮತ್ತಿಬ್ಬರು ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಹಾಗೂ ಬಸವರಾಜ ಬೊಮ್ಮಾಯಿ ಅವರಿಗೆ ಸಚಿವ ಸ್ಥಾನ ಸಿಗಬಹುದೆಂಬ ಚರ್ಚೆಗಳು ನಡೆದಿತ್ತಾದರೂ ಅವರಿಗೆ ಅವಕಾಶ ಸಿಕ್ಕಿಲ್. ಮುಂದೆ ಈ ನಾಯಕರನ್ನು ಸಂಪುಟಕ್ಕೆ ಸೇರ್ಪಡೆ ಮಾಡುವ ಸಾಧ್ಯತೆಗಳಿವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.