ದೆಹಲಿ: ಕೊರೋನಾ ಸೋಂಕಿನಿಂದ ಎದುರಾಗಿರುವ ಸಂಕಟ ಪರಿಸ್ಥಿತಿಯಿಂದ ಈವರೆಗೂ ಬ್ಯಾಂಕ್ ಸಾಲ ಮರುಪಾವತಿಗೆ ವಿನಾಯಿತಿ ನೀಡಲಾಗಿತ್ತು. ಆ ವಿನಾಯಿತಿ ಇನ್ನಿಲ್ಲ.
ದೇಶಾದ್ಯಂತ ಕೊರೋನಾ ವೈರಸ್ ಹಿನ್ನೆಲೆಯಲ್ಲಿ 6 ತಿಂಗಳ ಕಾಲ ಮುಂದೂಡಲಾಗಿದ್ದ ಸಾಲದ ಮೇಲಿನ ಇಎಂಐ ಪಾವತಿ ಶುರುವಾಗಲಿದೆ ಎಂದು ಆರ್ ಬಿಐ ಹೇಳಿದೆ.
ಸೆಪ್ಟೆಂಬರ್ 1 ರಿಂದ ಸಾಲ ಮರುಪಾವತಿ ವಿನಾಯಿತಿ ಮುಂದುವರಿಸುವುದಿಲ್ಲ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.
ಮಾರ್ಚ್ ನಿಂದ ಆಗಸ್ಟ್ ವರೆಗೆ 6 ತಿಂಗಳು ಕಂತು ಕಟ್ಟಲು ವಿನಾಯಿತಿ ನೀಡಿ, ಇಎಂಐ ಪಾವತಿ ಮುಂದೂಡಿಕೆಗೆ ಅವಕಾಶ ನೀಡಲಾಗಿತ್ತು.ಎಂದಿರುವ ಅವರು, ಸಾಲ ಪಾವತಿ ಮುಂದೂಡುವುದು ತಾತ್ಕಾಲಿಕ ಪರಿಹಾರ, ಇದರಿಂದ ಬ್ಯಾಂಕ್ ಗಳಿಗೆ ಭಾರಿ ಸಮಸ್ಯೆಯಾಗಲಿದೆ. ಇದರಿಂದ ಸಾಲ ಮರುಪಾವತಿದಾರರಿಗೂ ಪರಿಹಾರ ಸಿಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.