ದಾವಣಗೆರೆ: ಉಪಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಸಚಿವರಾದ ಶ್ರೀ ಗೋವಿಂದ ಕಾರಜೋಳರವರು, ಉಪಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಐಟಿ ಮತ್ತು ಬಿಟಿ ಸಚಿವರಾದ ಶ್ರೀ ಅಶ್ವತ ನಾರಾಯಣರವರು, ನಗರಾಭಿವೃದ್ಧಿ ಸಚಿವರಾದ ಶ್ರೀ ಬೈರತಿ ಬಸವರಾಜರವರು ಹಾಗೂ ದಾವಣಗೆರೆ ಸಂಸದರಾದ ಶ್ರೀ ಜಿ.ಎಂ.ಸಿದ್ದೇಶ್ವರರವರು ಹರಿಹರ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಬೇಟಿ ನೀಡಿ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮಿಗಳವರ ದಿವ್ಯ ಆಶೀರ್ವಾದ ಪಡೆದರು.
ಶ್ರೀ ವಚನಾನಂದ ಮಹಾಸ್ವಾಮಿಗಳವರಿಂದ ಆರೋಗ್ಯದ ಟಿಪ್ಸ್ ಗಳ ಮಾಹಿತಿಯನ್ನು ಪಡೆದುಕೊಂಡು ಶ್ರೀಪೀಠದಲ್ಲಿ ನಡೆಯುತ್ತಿರುವ ಅಭಿವೃದ್ಧಿಯನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು