ದೆಹಲಿ: ಕೇಂದ್ರದಲ್ಲಿ ಸಚಿವ ಸುರೇಶ್ ಚನ್ನಬಸಪ್ಪ ಅಂಗಡಿ ಅವರು ವಿಧಿವಶರಾಗಿದ್ದಾರೆ.
65 ವರ್ಷದ ಸುರೇಶ್ ಅಂಗಡಿ 2 ವಾರಗಳ ಹಿಂದೆ ಕೊರೋನಾ ಸೋಂಕಿಗೊಳಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ .
2004, 2009, 2014 ಮತ್ತು 2019ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ಅವರು ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಸಚಿವ ಸುರೇಶ ಅಂಗಡಿ ನಿಧನಕ್ಕೆ ಪ್ರಧಾನಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.