ದೆಹಲಿ: ಉತ್ತರ ಪ್ರದೇಶದ ಹತ್ರಾಸ್’ನಲ್ಲಿನ ಯುವತಿಯ ಅತ್ಯಾಚಾರ ಕೊಲೆ ಪ್ರಕರಣ ದೇಶಾದ್ಯಂತ ಆಕ್ರೋಶದ ಏಲ್ ಎಬ್ಬಿಸಿದೆ. ಈ ಪ್ರಕರಣ ಖಂಡಿಸಿ ಹತ್ರಾಸ್’ಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪೊಲೀಸರಿಂದ ಬಂಧನಕ್ಕೊಳಗಾಗಿ ಬಿಡುಗಡೆಗೊಂಡಿದ್ದರು. ಇದೀಗ ಅವರ ಮೇಲೆ ಮತ್ತೊಂದು ಕೇಸ್ ದಾಖಲಾಗಿದೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಸೇರಿದಂತೆ ನೂರಾರು ಕಾರ್ಯಕರ್ತರು, ಗ್ರೇಟರ್ ನೋಯ್ಡಾದ ಎಕ್ಸ್‌ಪ್ರೆಸ್ ವೇಗಳಲ್ಲಿ ಪ್ಯಾರಿ ಚೌಕ್ ಬಳಿ ಮೆರವಣಿಗೆ ಆರಂಭಿಸಿದ್ದರು. ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಸಹಿತ ಹಲವರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದ್ದರು.
ಆ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳದ ಮತ್ತು ಮಾಸ್ಕ್ ಧರಿಸದ ಕಾರಣಕ್ಕಾಗಿ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಸುಮಾರು 200 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ ಎಂದು ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದ ಪೋಲೀಸರು ತಿಳಿಸಿದ್ದಾರೆ.