ಬೆಂಗಳೂರು: ರಾಷ್ಟ್ರಪತಿ ಮಹಾತ್ಮ ಗಾಂಧೀಜಿಯವರ ಜನ್ಮದಿನವನ್ನು ಕೆಪಿಸಿಸಿ ಕಚೇರಿಯಲ್ಲಿ ಇಂದು ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸಲೀಂ ಅಹ್ಮದ್ ರವರ ಅಧ್ಯಕ್ಷತೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು.
ಹಿರಿಯ ನಾಯಕರು, ರಾಜ್ಯಸಭಾ ಸದಸ್ಯರೂ ಆದ ಶ್ರೀ ಮಲ್ಲಿಕಾರ್ಜುನ ಖರ್ಗೆ, ಮಾಜಿ ಕೇಂದ್ರ ಸಚಿವರಾದ ಕೆ.ಎಚ್. ಮುನಿಯಪ್ಪ, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ವಿ.ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎಂ.ನಾರಾಯಣ ಸ್ವಾಮಿ, ವಿ.ಪರಿಷತ್ ಸದಸ್ಯ ನಸೀರ್ ಅಹ್ಮದ್,ಯು.ಬಿ.ವೆಂಕಟೇಶ್ , ವಿ.ಎಸ್.ಉಗ್ರಪ್ಪ , ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಸಯೀದ್ ಅಹ್ಮದ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ: ಪುಷ್ಪಾ ಅಮರನಾಥ್, ಎನ್.ಎಸ್.ಯು.ಐ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಹಲವು ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು





















































