ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಶಾಸಕ ರೋಷನ್ ಬೇಗ್ ವಿರುದ್ದದ ತನಿಖೆಯನ್ನು ಸಿಬಿಐ ಬಿರುಸುಗೊಳಿಸಿದೆ.
ರೋಷನ್ ಬೇಗ್ ಅವರನ್ನು ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವಂತೆಯೇ ಇನ್ನೊಂದೆಡೆ ಅವರ ಮನೆ ಮೇಲೆ ಸಿಬಿಐ ತಂಡ ದಾಳಿಮಾಡಿದೆ.
ಬೆಂಗಳೂರಿನ ಕೋಲ್ಸ್ ಪಾರ್ಕ್ ಬಳಿಯ ಮನೆಗೆ ಸೋಮವಾರ ಬೆಳ್ಳಂಬೆಳಿಗ್ಗೆಯೇ ಲಗ್ಗೆ ಹಾಕಿದ ತಂಡ ದಾಖಲೆಗಳನ್ನು ಪರಿಶೀಲನೆ ನಡೆಸಿದೆ.
ಐಎಂಎಯಿಂದ ಹೂಡಿಕೆದಾರರಿಗೆ ಆಗಿದೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣದಲ್ಲಿ ರೋಷನ್ ಬೇಗ್ ಅವರ ಹೆಸರು ಕೇಳಿಬಂದಿತ್ತು. ಐಎಂಎ ಅಧ್ಯಕ್ಷ ಮನ್ಸೂರ್ ಖಾನ್ ನಿಂದ ನೂರಾರು ಕೋಟಿ ರೂಪಾಯಿಯನ್ನು ರೋಷನ್ ಬೇಗ್ ಪಡೆದುಕೊಂಡಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ
ಸಿಬಿಐ ಭಾನುವಾರ ಬಂಧಿಸಿತ್ತು.