ಬೆಂಗಳೂರು: ಪ್ರದೇಶ ಕಾಂಗ್ರೆಸ್ ಸಮಿತಿಯ ಉಸ್ತುವಾರಿಯಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ನೇಮಕಗೊಂಡ ನಂತರ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ ನಡೆಸಲಿದೆ.
ಡಿ. 6 ರಂದು ಕಾಂಗ್ರೆಸ್ ಮುಖಂಡರನ್ನು ಉದ್ದೇಶಿಸಿ ಸುರ್ಜೇವಾಲ ಭಾಷಣ ಮಾಡಲಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾರ್ಯಕ್ರಮದ ವಿವರ ನೀಡಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಉಸ್ತುವಾರಿ ವಹಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಡಿ.6ರಂದು ರಂದು ಭಾನುವಾರ ಮಧ್ಯಾಹ್ನ 3.30 ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಮುಖಂಡರು, ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಶಾಸಕರು, ಹಾಲಿ ಮತ್ತು ಮಾಜಿ ಸಂಸದರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಮತ್ತಿತರ ಪದಾಧಿಕಾರಿಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಪಕ್ಷದ ಸಂಘಟನೆ ಮತ್ತು ಬಲವರ್ಧನೆ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದೂ ಶಿವಕುಮಾರ್ ಅವರು ವಿವರಿಸಿದ್ದಾರೆ.