ಬೆಂಗಳೂರು: ಹಿರಿಯ ವಿಜ್ಞಾನಿ ಪ್ರೊ.ರೊದ್ದಂ ನರಸಿಂಹ ಅವರು ನಿಧನರಾಗಿದ್ದಾರೆ. ಸೋಮವಾರ ರಾತ್ರಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಹಾಗೂ ಕ್ಯಾಲಿಫೊರ್ನಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಉನ್ನತ ವ್ಯಾಸಂಗ ಮತ್ತು ಸಂಶೋರಾಗಿ, NAL ನಿರ್ದೇಶಕರೂ, ನಿಯಾಸ್ ನ ನಿರ್ದೇಶಕರಾಗಿ, ಬೆಂಗಳೂರಿನ ಜವಾಹರಲಾಲ್ ನೆಹರು ಕೇಂದ್ರದ ಇಂಜಿನಿಯರಿಂಗ್ ಮೆಕ್ಯಾನಿಕ್ಸ್ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
87 ವರ್ಷದ ರೊದ್ದ ನರಸಿಂಹ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದೊಂದು ವಾರದಿಂದ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.



























































