ಬೆಂಗಳೂರು: ಕೆಲವು ದಿನಗಳ ಹಿಂದೆ ಉದ್ಯೋಗ ಭದ್ರತೆಗಾಗಿ ಮುಷ್ಕರ ಕೈಗೊಂಡ ಸಾರಿಗೆ ನಿಗಮಗಳ ನೌಕರರ ವೇತನ ಕಡಿತ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರದ ನಿಲವು ಖಂಡನೀಯ ಎಂದಿರುವ ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ, ಸಾರಿಗೆ ನೌಕರರ ನಾಲ್ಕು ದಿನದ ಸಂಬಳವನ್ನು ರದ್ದು ಮಾಡಿರುವುದು ಸರಿಯಲ್ಲ ಎಂದಿದ್ದಾರೆ.
ದುಡಿಯುವ ವರ್ಗಗಳಿಗೆ ಕೋವಿಡ್ ಸಂದರ್ಭದಲ್ಲಿ ಇಂತಹ ನಿರ್ಧಾರಗಳು ಜನಪರ ಹೋರಾಟವನ್ನು ಹತ್ತಿಕುವ ಸರ್ಕಾರದ ಪ್ರಯತ್ನವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಸಚಿನ್ ಮಿಗಾ, ಸಾರಿಗೆ ಸಚಿವ ಲಕ್ಷ್ಮಣ್ ಸವಾದಿಯವರು ಈ ನಿರ್ಧಾರವನ್ನು ಕೂಡಲೇ ಕೈಬಿಡಬೇಕು. ಇಲ್ಲವಾದಲ್ಲಿ ಸಚಿವರ ನಿವಾಸದ ಮುಂದೆ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.