ದೆಹಲಿ: ರೈತರ ಉಳಿವಿಗಾಗಿ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಕೃಷಿ ಕಾಯ್ದೆ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು ಗಡಿ ಪ್ರದೇಶಕ್ಕೆ ಭೇಟಿ ನೀಡಿದ ಅರವಿಂದ್ ಕೇಜ್ರಿವಾಲ್, ಕೇಂದ್ರದ ಸಚಿವರು ರೈತರೊಂದಿಗೆ ಮುಕ್ತವಾದ ಚರ್ಚೆ ನಡೆಸಿದಲ್ಲಿ ಈ ಕಾಯ್ದೆಗಳು ಎಷ್ಟು ಹಾನಿಕಾರಕ ಎಂಬುದು ಅದರಿಂದ ತಿಳಿಯುತ್ತದೆ ಎಂದರು. ಈ ಕಾಯ್ದೆಗಳು ರೈತರ ಭೂಮಿಯನ್ನು ಕಸಿದುಬಿಡುತ್ತವೆ. ಹಾಗಾಗಿ ರೈತರ ಉಳಿವಿಗಾಗಿ ಮೂರೂ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿ ಎಂದು ಕೇಂದ್ರ ಸರ್ಕಾರಕ್ಕೆ ಕೇಜ್ರಿವಾಲ್ ಒತ್ತಾಯಿಸಿದರು. ಹೇಳಿದರು.