ಬೆಂಗಳೂರು: ಹೊಸ ವರ್ಷಾಚರಣೆ ಹಾಗೂ ಇತರೆ ಸಂಭ್ರಮಾಚರಣೆಗಳ ಸಂದರ್ಭಗಳಲ್ಲಿ ಅನುಸರಿಸಬೇಕಿರುವ ಮಾರ್ಗಸೂಚಿಗಳ ಜಾರಿ ಬಗ್ಗೆ ಬೆಂಗಳೂರಿನಲ್ಲಿಂದು ನಡೆದ ಸಚಿವರ ಸಭೆ ಕುತೂಹಲದ ಕೇಂದ್ರಬಿಂದುವಾಯಿತು.
ಗೃಹಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಎರಡೂ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.