ಬೆಙಗಳೂರು: ಕಾಂಗ್ರೆಸ್ ಪಕ್ಷ ಇಂದು ಸಂಸ್ಥಾಪನಾ ದಿನವನ್ನು ಆಚರಿಸಿತು. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ನಡೆದ ಪಕ್ಷದ 136ನೇ ಸಂಸ್ಥಾಪನಾ ದಿನಾಚರಣೆ ನಾಯಕರ ಹಾಗೂ ಕಾರ್ಯಕರ್ತರ ಸಂಘಟನಾ ಶಕ್ತಿಗೆ ಸಾಕ್ಷಿಯಾಯಿತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ರಾಣಿ ಸತೀಶ್ ಮೊದಲಾದವರು ಈ ಸಂಸ್ಥಾಪನಾ ದಿನದ ಸಮಾರಂಭದಲ್ಲಿ ಭಾಗವಹಿಸಿದ್ದರು.